ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಷರತ್ತು ಕೈಬಿಡಲು ಕಸಾಪ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 0:32 IST
Last Updated 8 ಆಗಸ್ಟ್ 2020, 0:32 IST
ಮನು ಬಳಿಗಾರ್
ಮನು ಬಳಿಗಾರ್   

ಬೆಂಗಳೂರು: ಪದವಿ ಕಾಲೇಜುಗಳಸಹಾಯಕಪ್ರಾಧ್ಯಾಪಕರನೇಮಕಾತಿಯಕರಡು ನಿಯಮಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಓದಿರುವ ವಿಷಯವನ್ನೇ, ಪದವಿಯಲ್ಲಿಯೂ ಐಚ್ಛಿಕ ವಿಷಯವಾಗಿ ಓದಿರಬೇಕು ಎಂಬ ಷರತ್ತನ್ನು ಕೈಬಿಡ
ಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸರ್ಕಾರಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ.

‘ಪದವಿಯಲ್ಲಿ ಕನ್ನಡವನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಾಸ ಮಾಡಿರಬೇಕು ಎಂದು ವಿಧಿಸಿರುವ ಷರತ್ತಿನಿಂದಸಾವಿರಾರು ಮಂದಿ ಅವಕಾಶ ವಂಚಿತರಾಗಬೇಕಾಗುತ್ತದೆ. ಈ ಸಂಬಂಧ ಹಲವು ಅಭ್ಯರ್ಥಿಗಳು ಪತ್ರ ಬರೆದು, ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡವನ್ನು ಓದುತ್ತಿರುವವರೇ ವಿರಳವಾಗುತ್ತಿರುವ ಈ ಸಂದರ್ಭದಲ್ಲಿ ಹೀಗೆ ನಿರ್ಬಂಧಗಳನ್ನು ವಿಧಿಸುತ್ತಾ ಹೋದಲ್ಲಿ ಈ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆಯಲು ಯಾರೂ ಮುಂದೆ ಬರುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಪದವಿಯಲ್ಲಿ ಕನ್ನಡವನ್ನು ಐಚ್ಛಿಕ ವಿಷಯವಾಗಿ ಓದದಿದ್ದರೂ ಸ್ನಾತಕೋತ್ತರ ತರಗತಿಗಳಲ್ಲಿ ಅದೇ ವಿಷಯವನ್ನು ಆಳವಾಗಿ ಅಧ್ಯಯನ ಮಾಡುತ್ತಾರೆ. ಪಿಎಚ್‌.ಡಿ ಮಾಡಿದವರು ಹೆಚ್ಚಿನ ಅಧ್ಯಯನ ಮಾಡಿರುತ್ತಾರೆ . ಪದವಿ ಹಂತದಲ್ಲಿ ಐಚ್ಚಿಕವಾಗಿ ವಿಷಯವನ್ನು ಓದಿಲ್ಲ ಎಂಬ ಕಾರಣ ನೀಡಿ ಅವರನ್ನು ಅನರ್ಹಗೊಳಿಸುವುದು ನ್ಯಾಯವಾಗುವುದಿಲ್ಲ. ಷರತ್ತು ಕೈಬಿಡಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.