ADVERTISEMENT

ವನ್ಯಜೀವಿ ದಾಳಿ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ?

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 20:55 IST
Last Updated 10 ಮಾರ್ಚ್ 2020, 20:55 IST
 ಆನಂದ್ ಸಿಂಗ್
ಆನಂದ್ ಸಿಂಗ್   

ಬೆಂಗಳೂರು: ‘ರಾಜ್ಯದಲ್ಲಿ ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು ₹ 7.5 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಕಾಡಾನೆ ದಾಳಿ ಕುರಿತ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಾಡಾನೆ ದಾಳಿ ಪ್ರಕರಣಗಳು ಇಳಿಮುಖವಾಗಿವೆ’ ಎಂದರು.

ಜೆಡಿಎಸ್‌ನ ಎ.ಟಿ.ರಾಮಸ್ವಾಮಿ, ‘ಕಾಡಾನೆಗಳ ಉಪಟಳದಿಂದ ಹಳ್ಳಿಗಳ ರೈತರು ಬಸವಳಿದಿದ್ದಾರೆ. ಕಾಡಿನಲ್ಲಿ ಕುಡಿಯುವ ನೀರು ಮತ್ತು ಆಹಾರದ ಕೊರತೆ ಹೆಚ್ಚಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿವೆ’ ಎಂದರು.

ADVERTISEMENT

ಎಚ್.ಕೆ.ಕುಮಾರಸ್ವಾಮಿ, ‘ಸಕಲೇಶಪುರ, ಆಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಅರಣ್ಯಾಧಿಕಾರಿಗಳು ಆನೆಗಳನ್ನು ಹಿಡಿಯಲು ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದ್ದಾರೆ. ಒಂಟಿ ಆನೆಗಳನ್ನು ಸೆರೆಹಿಡಿಯುವ ಅಧಿಕಾರವನ್ನು ಅಧಿಕಾರಿಗಳಿಗೆ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.