ಬೆಂಗಳೂರು: ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಬಿಜೆಪಿ ಶಾಸಕ ಆನಂದ ಮಾಮನಿ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆನಂದ ಮಾಮನಿ ಅವರು ಬೆಳಗಾವಿಯ ಸವದತ್ತಿ ಎಲ್ಲಮ್ಮ ಕ್ಷೇತ್ರದಿಂದ ಸತತ ಮೂರನೇ ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.
ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಅವರು 1996_1999 ರ ಅವಧಿಯಲ್ಲಿ ಉಪ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ರಾಜಿನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಇದೀಗ ಮಾಮನಿ ಅವರನ್ನು ನೇಮಕ ಮಾಡುವ ಮೂಲಕ ಆ ಸ್ಥಾನವನ್ನು ತುಂಬಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.