ADVERTISEMENT

ಮತದಾನಕ್ಕೂ ಮುನ್ನ ಮನೆಯಲ್ಲಿರುವ ಸಿಲಿಂಡರ್‌ಗೆ ನಮಸ್ಕರಿಸಿ: ಡಿಕೆಶಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2023, 12:42 IST
Last Updated 12 ಏಪ್ರಿಲ್ 2023, 12:42 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರ ಜೋರಾಗಿದೆ.

ಸಿಲಿಂಡರ್ ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳೇ ಬಾಕಿ ಉಳಿದಿವೆ. ಈ ಬಾರಿ ಮತದಾನ ಮಾಡುವ ಮುನ್ನ ನಿಮ್ಮ ಮನೆಯ ಎಲ್ಪಿಜಿ ಸಿಲಿಂಡರ್‌ಗೆ ನಮಸ್ಕರಿಸಿ ಯಾರಿಗೆ ಮತ ನೀಡಬೇಕೆಂದು ನಿರ್ಧರಿಸಿ. ಇದು ರಾಜ್ಯದ ಜನತೆಗೆ ನನ್ನ ವಿನಮ್ರ ಮನವಿ’ ಬರೆದುಕೊಂಡಿದ್ದಾರೆ.

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈಗಾಗಲೇ 166 ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.

ಇತ್ತ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮತ್ತೊಂದೆಡೆ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೆಲವು ತಿಂಗಳ ಹಿಂದೆಯೇ ಘೋಷಿಸಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.