ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಕಣದಲ್ಲಿರುವ ಪ್ರಮುಖ ಪಕ್ಷಗಳ ಅಭ್ಯರ್ಥಿಗಳಲ್ಲಿ ಶೇ 39ರಷ್ಟು ಮಂದಿಯ ವಿರುದ್ಧ ಅಪರಾಧ ಪ್ರಕರಣಗಳು ಇವೆ. ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರದಲ್ಲೇ ಈ ಮಾಹಿತಿ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳಿಗೆ ಮಣೆ ಹಾಕಿವೆ ಎಂಬುದನ್ನು ಈ ದತ್ತಾಂಶಗಳು ಸೂಚಿಸುತ್ತವೆ ಎನ್ನುತ್ತದೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಇಡಿಆರ್) ವರದಿ. ಕಣದಲ್ಲಿರುವ 2,613 ಅಭ್ಯರ್ಥಿಗಳಲ್ಲಿ 2,586 ಅಭ್ಯರ್ಥಿಗಳ ನಾಮಪತ್ರವನ್ನು ಪರಿಶೀಲಿಸಿ ಎಡಿಆರ್ ಈ ವರದಿ ಸಿದ್ಧಪಡಿಸಿದೆ
ಈ ಪ್ರಮುಖ ನಾಲ್ಕು ರಾಜಕೀಯ ಪಕ್ಷಗಳಿಂದ ಕಣಕ್ಕೆ ಇಳಿದಿರುವ ಒಟ್ಟು ಅಭ್ಯರ್ಥಿಗಳಲ್ಲಿ, 861 ಅಭ್ಯರ್ಥಿಗಳ ನಾಮಪತ್ರವನ್ನು ಪರಿಶೀಲಿಸಲಾಗಿದೆ. ಅವರಲ್ಲಿ 336 (ಶೇ 39ರಷ್ಟು) ಅಭ್ಯರ್ಥಿಗಳು ತಮ್ಮ ವಿರುದ್ಧ ಅಪರಾಧ ಪ್ರಕರಣಗಳು ಇವೆ ಎಂದು ಘೋಷಿಸಿಕೊಂಡಿದ್ದಾರೆ
ಆಧಾರ: ಎಡಿಆರ್, ಚುನಾವಣಾ ಆಯೋಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.