ಬೆಂಗಳೂರು: ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಕಾಂಗ್ರೆಸ್ ಸವಾಲು ಹಾಕಿದೆ.
ನಾಯಕತ್ವ ಬದಲಾವಣೆ ಮತ್ತು ಸಚಿವ ನಡುವಿನ ಭಿನ್ನಾಭಿಪ್ರಾಯದ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
‘ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ, ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್, ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ, ಸಿಎಂ ಹೇಳಿದ್ರೆ ರಾಜೀನಾಮೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಯಡಿಯೂರಪ್ಪ vs ಬಿ.ಎಲ್. ಸಂತೋಷ್, ಅರಗ ಜ್ಞಾನೇಂದ್ರ vs ಯತ್ನಾಳ್, ಸೊಗಡು ಶಿವಣ್ಣ vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ vs ಕೆ.ಸುಧಾಕರ್, ಸೋಮಶೇಖರ್ vs ಮಾಧುಸ್ವಾಮಿ, ಮುನಿರತ್ನ vs ಮಾಧುಸ್ವಾಮಿ, ಆರ್.ಅಶೋಕ್ vs ಅಶ್ವಥ್ ನಾರಾಯಣ್, ಭಗವಂತ್ ಖೂಬಾ vs ಶರಣು ಸಲಗರ.. ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುತ್ತದೆಯೇ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಬಯಕೆಯಷ್ಟೇ ಅಲ್ಲ, ಬಿಜೆಪಿಯವರ ಬಯಕೆಯೂ ಕೂಡ. ಈ ಬಯಕೆಸಚಿವ ಶ್ರೀರಾಮುಲುಅವರ ಬಾಯಲ್ಲೇ ವ್ಯಕ್ತವಾಗಿದೆ.ಸಿಎಂ ಬೊಮ್ಮಾಯಿಅವರ ‘ತಳ್ಳುವ ಸರ್ಕಾರದ’ಮೇಲೆ ಮಾಧುಸ್ವಾಮಿಯವರಂತೆ ಸಚಿವ ಶ್ರೀರಾಮುಲು ಅವರಿಗೂ ನಂಬಿಕೆ ಇಲ್ಲವಾಗಿದೆಯೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಸರ್ಕಾರ ನಡೀತಾ ಇಲ್ಲ. ಮ್ಯಾನೇಜ್ ಮಾಡ್ತಾ ಇದ್ದೀವಿ ಅಂಥ ನಾನು ಹೇಳಿರಬಹುದು. ಯಾರ ಜತೆ ಮಾತಾಡಿದ್ದೇನೆ, ಯಾವಾಗ ಮಾತನಾಡಿದ್ದೇನೆ ಎಂಬುದು ನನಗೆ ಗೊತ್ತಿಲ್ಲ’ ಎಂದು ಮಂಗಳವಾರ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮಾಧುಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ‘ಮಾಧುಸ್ವಾಮಿ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.
ಇವನ್ನೂ ಓದಿ...
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆಲವೇ ಗಂಟೆಗಳಲ್ಲಿ ಸ್ಥಾನ ತೊರೆದ ಆಜಾದ್
‘ಮ್ಯಾನೇಜ್ ಮಾಡ್ತಿದ್ದೀವಿ ಎಂದಿರಬಹುದು’: ಆಡಿಯೊ ಸಂಭಾಷಣೆ ಒಪ್ಪಿಕೊಂಡ ಮಾಧುಸ್ವಾಮಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.