ವಿಧಾನ ಪರಿಷತ್: ರಾಜ್ಯ ಶಿಕ್ಷಣ ನೀತಿಯಲ್ಲಿ ಮಾತೃಭಾಷಾ ಶಿಕ್ಷಣಕ್ಕೆ ಆದ್ಯತೆ ನೀಡುವ ಜತೆಗೆ, ಇಂಗ್ಲಿಷ್ ಕಲಿಕೆಗೂ ಪ್ರಾಮುಖ್ಯತೆ ಇರಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಎನ್‌ಇಪಿ ಕುರಿತು ನಿಯಮ 330ರ ಅಡಿ ನಡೆದ ಮುಂದುವರಿದ ಚರ್ಚೆಯಲ್ಲಿ ಅವರು ಮಾತನಾಡಿದರು.
ಪೂರ್ವಸಿದ್ಧತೆ ಇಲ್ಲದೆ ತರಾತುರಿಯಲ್ಲಿ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದರಿಂದ ಸಾಕಷ್ಟು ಗೊಂದಲವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಎನ್‌ಇಪಿ ಜಾರಿಯಾಗಿರಲಿಲ್ಲ. ಕೆಲ ಪಾಠಗಳನ್ನು ಬದಲಿಸಿದ್ದರಿಂದ ಸೃಷ್ಟಿಯಾಗಿದ್ದ ಗೊಂದಲ ನಿವಾರಿಸಲು ಹಳೆಯ ಪಾಠಗಳನ್ನೇ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಸಲಾಗಿದೆ. ರಾಜ್ಯ ಶಿಕ್ಷಣ ನೀತಿ ರೂಪುಗೊಂಡ ನಂತರ ಹೊಸ ಪಠ್ಯಚೌಕಟ್ಟು ಸಿದ್ಧವಾಗಲಿದೆ ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡ ಅವರು, ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.