ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.
ಬೆಳಿಗ್ಗೆ ಜಿಮ್ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.
ವಿವಿಧ ಪತ್ರಿಿಕೆ, ಟಿವಿ ಚಾನೆಲ್ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Koo Appಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಗುರಲಿಂಗಸ್ವಾಮಿಯವರ ನಿಧನ ಆಘಾತ ಹಾಗೂ ನೋವು ತಂದಿದೆ. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು, ಪತ್ರಿಕಾ ರಂಗದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬದವರಿಗೆ ಈ ನೋವು ಸಹಿಸುವ ಶಕ್ತಿ ಸಿಗಲಿ.- Araga Jnanendra (@aragajnanendra) 22 Aug 2022
Koo Appಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಇಷ್ಟು ಸಣ್ಣ ವಯಸ್ಸಿಗೇ ಅವರು ಸಾವಿಗೀಡಾಗಿರುವುದು ದುರಾದೃಷ್ಟಕರ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ.- D K Shivakumar (@dkshivakumar_official) 22 Aug 2022
Koo Appಸನ್ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಧಿಕಾರಿ ಶ್ರೀ ಗುರುಲಿಂಗಸ್ವಾಮಿ ಹೋಳಿಮಠ ಅವರ ಹಠತ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. @BJP4Karnataka- Dr. Murugesh R Nirani (@murugesh_nirani) 22 Aug 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.