ಸಂಪುಟ ವಿಸ್ತರಣೆಯಲ್ಲಿ ಪಕ್ಷನಿಷ್ಠ ಶಾಸಕರು ಮತ್ತು ಯುವಕರಿಗೆ ಅನ್ಯಾಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು.
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ" - ಅಭಯ ಪಾಟೀಲ, ಶಾಸಕರು, ಬೆಳಗಾವಿ ದಕ್ಷಿಣ
ಏಳು ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಜುಭಾಯಿ ವಾಲಾ. ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಹಾಗೂ ಮುರುಗೇಶ್ ನಿರಾಣಿ.
1. ಉಮೇಶ್ ಕತ್ತಿ
2. ಎಸ್. ಅಂಗಾರ
3. ಸಿ.ಪಿ. ಯೋಗೀಶ್ವರ್
4. ಅರವಿಂದ ಲಿಂಬಾವಳಿ
5. ಎಂಟಿಬಿ ನಾಗರಾಜ್
6. ಆರ್. ಶಂಕರ್
7. ಮುರುಗೇಶ್ ನಿರಾಣಿ
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರೋದು ಕಾಂಗ್ರೆಸ್ ಎಂದು ಸಿದ್ದರಾಮಯ್ಯ ಇಲ್ಲಿ ಪ್ರತಿಪಾದಿಸಿದರು. ಗ್ರಾಮ ಜನಾಧಿಕಾರ ಸನ್ಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪ ಪಕ್ಷ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು.
ಬೆಳಗಾವಿ: ‘ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆಯು ದೊಡ್ಡ ಮಟ್ಟದಲ್ಲಿ ಆಗುತ್ತದೆ. ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಅವಕಾಶ ಸಿಗಲಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ: ‘ಕಾಲ ಕೂಡಿ ಬಂದಾಗ ನನಗೂ ಸಚಿವ ಸ್ಥಾನ ಸಿಗುತ್ತದೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
‘ನನ್ನ ಕ್ಷೇತ್ರದ ಅಭಿವೃದ್ಧಿಗೆ ಗಮನಹರಿಸಿದ್ದೇನೆ. ಸಚಿವ ಸ್ಥಾನ ಸಿಗದಿರಬಹುದು. ಆದರೆ, ನನ್ನ ಕ್ಷೇತ್ರಕ್ಕೆ ಬೇಕಾದ ಕೆಲಸ ಮಾಡಿಕೊಡುತ್ತಿದ್ದಾರೆ. ಮುಂದೆ ಸಚಿವರನ್ನಾಗಿಯೂ ಮಾಡಬಹುದು ಎನ್ನುವ ವಿಶ್ವಾಸವಿದೆ. ಗೆದ್ದ 12 ಶಾಸಕರ ಪೈಕಿ 11 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಹೀಗಾಗಿ, ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಹೇಳುವುದಕ್ಕೆ ಬರುವುದಿಲ್ಲ. ನನ್ನ ಕ್ಷೇತ್ರದವರೇ ಉಪ ಮುಖ್ಯಮಂತ್ರಿ ಆಗಿರುವುದಕ್ಕೆ ಸಂತೋಷವಿದೆ. ಕ್ಷೇತ್ರದ ಜನರಿಗೂ ಪರಿಸ್ಥಿತಿ ಗೊತ್ತಿದೆ’ ಎಂದರು.
ಸಚಿವ ಸ್ಥಾನದ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದರು. ರಾಜೀನಾಮೆ ನೀಡಿದರೆ, ಅದಕ್ಕೆ ಸಮಾನಾಂತರ ಹುದ್ದೆಯನ್ನು ನೀಡುವುದಾಗಿ ಸಿಎಂ ಭರವಸೆ ನೀಡಿದರು. ಬಳಿಕ ಅದಕ್ಕೆ ನಾಗೇಶ್ ಒಪ್ಪಿಗೆ ನೀಡಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ನೂತನ ಸಚಿವರ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ' ಎಂದು ಹೇಳಿದ್ದಾರೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ಆರಂಭವಾಗಿದೆ.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಆರ್. ಅಶೋಕ ಅವರೊಂದಿಗೆ ಮುಖ್ಯಮಂತ್ರಿ ಸಂಪುಟ ಸಭೆಗೆ ಬಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.