ADVERTISEMENT

KAS Exams: ‘ಕನ್ನಡರಾಮಯ್ಯ’ ಅವರೇ ಮರು ಪರೀಕ್ಷೆ ನಡೆಸಲು ಆದೇಶಿಸಿ– ಬಿಜೆಪಿ

ಕನ್ನಡರಾಮಯ್ಯ ಎಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯನವರು ಮರು ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಒತ್ತಾಯಿಸಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಆಗಸ್ಟ್ 2024, 14:22 IST
Last Updated 31 ಆಗಸ್ಟ್ 2024, 14:22 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದ್ದು, ಮರು ಪರೀಕ್ಷೆ ನಡೆಸುವಂತೆ ಕರ್ನಾಟಕ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ, ಕನ್ನಡರಾಮಯ್ಯ ಎಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯನವರು ಮರು ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಒತ್ತಾಯಿಸಿದೆ.

'ಕೆಎಎಸ್‌ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಆಗ್ರಹ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ ಭಂಡ ಕಾಂಗ್ರೆಸ್ ಸರ್ಕಾರ ಅದಕ್ಕೆ ಏಕೆ ಕಿವಿಗೊಡಲಿಲ್ಲ ಎಂಬುದಕ್ಕೆ ಸದ್ಯ ಕೆಎಎಸ್‌ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳೇ ಸಾಕ್ಷಿ. ಸಂಧಿ-ಸಮಾಸದ ಬಗ್ಗೆ ಭಾಷಣ ಮಾಡುವ, ಕನ್ನಡರಾಮಯ್ಯ ಎಂದು ವಂದಿಮಾಗಧರಿಂದ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯ ನವರೆ, ಪ್ರಶ್ನೆ ಪತ್ರಿಕೆಯ 70 ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳು ತಪ್ಪಿನಿಂದಲೇ ತುಂಬಿದ್ದವು. ಸಹಸ್ರಾರು ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವ ಬದಲು, ಕೂಡಲೇ ಕೆಎಎಸ್‌ ಮರು ಪರೀಕ್ಷೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದೆ.

ADVERTISEMENT

ಆಗಸ್ಟ್ 27ರಂದು ಕೆಎಎಸ್ ‍ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದವು. ಪ್ರಶ್ನೆ ಪತ್ರಿಕೆಗಳಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಗೊಂಡ ಕೆಲ ಪ್ರಶ್ನೆಗಳು ತಪ್ಪಾಗಿದ್ದರೇ, ಕೆಲವು ಅನರ್ಥವಾಗಿದ್ದವು.

ಇದರಿಂದ ಮರು ಪರೀಕ್ಷೆ ನಡೆಸುವಂತೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಅನೇಕ ಅಭ್ಯರ್ಥಿಗಳು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಆದರೆ, ಕೆಪಿಎಸ್‌ಸಿ ಮರು ಪರೀಕ್ಷೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪ್ರಶ್ನೆಗಳನ್ನು ಕನ್ನಡಕ್ಕೆ ಅನುವಾದ ಮಾಡಿದವರು ಭಾಷಾಂತರ ನಿರ್ದೇಶನಾಲಯದ ಭಾಷಾಂತರಕಾರರು ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.