ನವದೆಹಲಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ,ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಅಮಿತ್ ಶಾ ಅವರನ್ನು ಭೇಟಿಯಾಗಿದೆ.
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರಚಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಶೆಟ್ಟರ್ ನಿಯೋಗದಲ್ಲಿ ಶಾಸಕರಾದಬಸವರಾಜ ಬೊಮ್ಮಾಯಿ,ಅರವಿಂದ ಲಿಂಬಾವಳಿ,ಜೆ.ಸಿ.
ಮಧ್ಯಾಹ್ನ ಮತ್ತೆ ಸಭೆ: ಶೆಟ್ಟರ್
ನವದೆಹಲಿ: ಅಮಿತ್ ಶಾ ಭೇಟಿ ಮಾಡಿ ರಾಜ್ಯಬಿಜೆಪಿ ಮುಖಂಡರ ನಿಯೋಗಮರಳಿದೆ.
ಭೇಟಿ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದಜಗದೀಶ್ ಶೆಟ್ಟರ್, ‘ಮಧ್ಯಾಹ್ನ 3ಗಂಟೆಗೆ ಮತ್ತೆ ಭೇಟಿ ಮಾಡಿ ಚರ್ಚಿಸಲು ಶಾ ಸೂಚಿಸಿದ್ದಾರೆ’ಎಂದು ಹೇಳಿದರು.
ರಾಜ್ಯ ರಾಜಕಾರಣದ ಸ್ಥಿತಿ ಗತಿ ಕುರಿತು ಹೈಕಮಾಂಡ್‌ಗೆ ವಿವರ ನೀಡಲಾಗಿದೆ. ಮತ್ತೆ ಸಭೆ ನಡೆಸಿ ವಿವರ ಪಡೆಯುವುದಾಗಿ ಶಾ ತಿಳಿಸಿದ್ದಾರೆ ಎಂದು ಅವರು ಹೇಳಿದರು.
‘ಗುರುವಾರವೇ ಮುಖ್ಯಮಂತ್ರಿಯಾಗುತ್ತೇನೆ’ ಎಂಬ ಉಮೇದಿನಲ್ಲಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವೇಗಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಡಿವಾಣ ಹಾಕಿದ್ದರು ಎನ್ನಲಾಗಿತ್ತು.
‘ಸಭಾಧ್ಯಕ್ಷರು ಹಾಗೂ ಸುಪ್ರೀಂ ಕೋರ್ಟ್ ಎದುರು ಬಾಕಿ ಇರುವ ಕಾಂಗ್ರೆಸ್–ಜೆಡಿಎಸ್‌ನ 15 ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಅರ್ಜಿಗಳು ಇತ್ಯರ್ಥ ಆಗುವವರೆಗೆ ಸರ್ಕಾರ ರಚನೆಗೆ ಅವಸರ ಮಾಡಬೇಡಿ ಎಂದು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ’ ಎಂದು ಬಿಜೆಪಿ ಮೂಲಗಳು ತಿಳಿಸಿದ್ದವು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾ ಅವರನ್ನು ಭೇಟಿ ಮಾಡಿ ಬಂದ ನಂತರವಷ್ಟೇ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಯ ಹಕ್ಕುಮಂಡಿಸುವ ಇರಾದೆ ಯಡಿಯೂರಪ್ಪ ಅವರದ್ದಾಗಿತ್ತು. ಆದರೆ, ಹೈಕಮಾಂಡ್ ನಿರಾಸಕ್ತಿ ತಾಳಿದ್ದರಿಂದ ಅವರು ದೆಹಲಿ ಭೇಟಿ ಕಾರ್ಯಕ್ರಮ ರದ್ದುಪಡಿಸಿದ್ದರು.
‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.