ಬೆಂಗಳೂರು: ದೇಶದಲ್ಲಿ ಕೋವಿಡ್ ರೋಗಿಗಳಿಗೆ ನೆರವಾಗಲು ವೈದ್ಯಕೀಯ ಆಮ್ಲಜನಕವನ್ನು ಕ್ಷಿಪ್ರವಾಗಿ ತಲುಪಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಸಹಯೋಗದಲ್ಲಿ ಆಮ್ಲಜನಕ ಎಕ್ಸ್‌ಪ್ರೆಸ್ ಸೇವೆ ಆರಂಭಿಸಿದೆ.
ಆಮ್ಲಜನಕ ಎಕ್ಸ್‌ಪ್ರೆಸ್ ರೈಲಿನ ಮೂಲಕ ಈವರೆಗೆ ದೇಶದ ವಿವಿಧೆಡೆಗೆ 9440 ಮೆಟ್ರಿಕ್ ಟನ್ ದ್ರವಆಮ್ಲಜನಕ ತಲುಪಿಸಲಾಗಿದೆ ಎಂದು ರಾಜ್ಯ ಬಿಜೆಪಿ ಹೇಳಿದೆ.
ಈ ಬಗ್ಗೆ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಇದುವರೆಗೆ 150 ಆಮ್ಲಜನಕ ಎಕ್ಸ್‌ಪ್ರೆಸ್ ರೈಲುಗಳು ತಮ್ಮ ಪ್ರಯಾಣ ಮುಗಿಸಿದೆ. ಆಮ್ಲಜನಕ ಎಕ್ಸ್‌ಪ್ರೆಸ್ ಮೂಲಕ ಪ್ರತಿನಿತ್ಯ 800 ಮೆಟ್ರಿಕ್ ಟನ್ ದ್ರವ ಆಮ್ಲಜನಕವನ್ನು ವಿವಿಧೆಡೆ ತಲುಪಿಸಲಾಗುತ್ತದೆ ಎಂದು ಹೇಳಿದೆ.
ಆಮ್ಲಜನಕ ಎಕ್ಸ್‌ಪ್ರೆಸ್ ಮೂಲಕ ಇದುವರೆಗೆ ಕರ್ನಾಟಕ ಸಹಿತ 13 ರಾಜ್ಯಗಳಿಗೆ ದ್ರವ ಆಮ್ಲಜನಕ ಸರಬರಾಜು ಮಾಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.