ಬೆಂಗಳೂರು: ‘ಕೊಲ್ಲಾಪುರದ ಮತ್ತು ಸುತ್ತಮುತ್ತ ಕನ್ನಡಿಗರಿಗೆ ಕಿರುಕುಳ ನೀಡುತ್ತಿರುವ ಶಿವಸೇನೆಯವರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿ. ಸೋಮಶೇಖರ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ.. ಶಿವಸೇನಾ ತಗಾದೆ: ಕೊಲ್ಹಾಪುರಕ್ಕೆ ಬಸ್ ಸಂಚಾರ ನಿಲುಗಡೆ
‘ಗಡಿ ಭಾಗದಲ್ಲಿರುವ ಕನ್ನಡಿಗರು ಮತ್ತು ಮರಾಠಿ ಭಾಷಿಗರ ನಡುವೆ ಸೌಹಾರ್ದ ವಾತಾವರಣ ಉಂಟು ಮಾಡುವ ದಿಸೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ಅವರು ಆಗ್ರಹಿಸಿದ್ದಾರೆ.
‘ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಮಹಾರಾಷ್ಟ್ರದ ಗೃಹ ಸಚಿವರನ್ನು ಸಂಪರ್ಕಿಸಿ, ಮಾತುಕತೆ ನಡೆಸಬೇಕು’ ಎಂದೂ ಮನವಿ ಮಾಡಿದ್ದಾರೆ.
‘ಶಿವಸೇನೆ ಕಾರ್ಯಕರ್ತರ ಈ ನಡವಳಿಕೆ ಖಂಡನೀಯ. ಕನ್ನಡ ನಾಡಿನ ಜನರು ಹೆಚ್ಚಿರುವ ಕೊಲ್ಲಾಪುರದಲ್ಲಿ ನಾಮಫಲಕಗಳು ಕನ್ನಡದಲ್ಲಿಯೇ ಇರುವುದು ಅಪರಾಧವಲ್ಲ. ಅದನ್ನೇ ದೊಡ್ಡದು ಮಾಡಿ ಅಲ್ಲಿನ ಕನ್ನಡಿಗರಿಗೆ ಹಾಗೂ ಅವರು ನಡೆಸುತ್ತಿರುವ ವಾಣಿಜ್ಯ ಸಂಸ್ಥೆಗಳಿಗೆ ತೊಂದರೆ ಕೊಡುತ್ತಿರುವುದು ಹಾಗೂ ರಾಜ್ಯದ ಸರ್ಕಾರಿ ಬಸ್ಸುಗಳಿಗೆ ಹಾನಿ ಉಂಟು ಮಾಡುತ್ತಿರುವುದು ಖಂಡನೀಯ’ ಎಂದೂ ಸೋಮಶೇಖರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.