ADVERTISEMENT

ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 9:30 IST
Last Updated 4 ಮಾರ್ಚ್ 2022, 9:30 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಈ ಬಾರಿಯ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ.ಮೇಕೆದಾಟು ಯೋಜನೆಗಾಗಿ ಒಂದು ಸಾವಿರ ಕೋಟಿ ಅನುದಾನ ನೀಡಿದ್ದಾರೆ.

ಪ್ರಮುಖ ನೀರಾವರಿ ಯೋಜನೆಗಳಿಗೆ ದೊರೆತ ಅನುದಾನ
* 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ₹ 5 ಸಾವಿರ ಕೋಟಿ
* ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ₹ 1 ಸಾವಿರ ಕೋಟಿ
* ಭದ್ರಾ ಮೇಲ್ದಂಡೆ ಯೋಜನೆಗೆ₹ 3 ಸಾವಿರ ಕೋಟಿ
* ಎತ್ತಿನಹೊಳೆ ಯೋಜನೆಗೆ₹ 3 ಸಾವಿರ ಕೋಟಿ
* ಮೇಕೆದಾಟು ಯೋಜನೆಗೆ₹ 1 ಸಾವಿರ ಕೋಟಿ
* ತುಂಗಭದ್ರಾ ಜಲಾಶಯದ ನೀರು ಸಂಗ್ರಹ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ₹ 1 ಸಾವಿರ ಕೋಟಿ
* ₹ 8,774 ಕೋಟಿ ಮೊತ್ತದ ಹೊಸ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ
* ರಾಜ್ಯಗಳ ಕೆರೆ ಅಭಿವೃದ್ಧಿಗೆ ₹ 500 ಕೋಟಿ ಮೊತ್ತದ ಕ್ರಿಯಾ ಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT