ಬೆಂಗಳೂರು: ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಷೋಷಿಸಿದರು.
ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಅವರು, ಹೋಬಳಿ ಮಟ್ಟದಲ್ಲಿ ‘ಮಾದರಿ ಶಾಲೆ’ಗಳನ್ನು ನಿರ್ಮಿಸಲಾಗುವುದು. ಈ ಮೂಲಕ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ ಮಾಡಲಾಗುವುದು ಎಂದು ಹೇಳಿದರು.
‘ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡಲಾಗುವುದು. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ಇರಲಿದೆ’ ಎಂದು ಬೊಮ್ಮಾಯಿ ತಿಳಿಸಿದರು.
‘ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು ₹100 ಕೋಟಿ ನೀಡಲಾಗುವುದು’ ಎಂದು ಅವರು ಘೋಷಿಸಿದರು.
‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಹಾಗೂ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ಇವನ್ನೂ ಓದಿ...
Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.