ADVERTISEMENT

Karnataka Budget 2024| ಅಂಗನವಾಡಿ ಕಾರ್ಯಕರ್ತೆಯರಿಗೆ 75,938 ಸ್ಮಾರ್ಟ್ ಫೋನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2024, 7:13 IST
Last Updated 16 ಫೆಬ್ರುವರಿ 2024, 7:13 IST
<div class="paragraphs"><p>ಸಂಗ್ರಹ ಚಿತ್ರ( ಸಾಂದರ್ಭಿಕ ಚಿತ್ರ)</p></div>

ಸಂಗ್ರಹ ಚಿತ್ರ( ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವೆಲ್ಲಾ ಯೋಜನೆಗಳು ಸಿಕ್ಕಿವೆ. ನೀಡಲಾದ ಬಜೆಟ್‌ ಎಷ್ಟು? ಏನೆಲ್ಲಾ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ( ಫೆ.16) ಮಂಡಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ₹200 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು ₹10 ಕೋಟಿ ಒದಗಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

75,938 ಸ್ಮಾರ್ಟ್ ಫೋನ್‌:

ಅಂಗನವಾಡಿ ಕೇಂದ್ರಗಳ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು ₹90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಕೆಗಾಗಿ ಇತ್ತೀಚಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.