ADVERTISEMENT

Karnataka bypoll result | ಈ ಗೆಲುವು ದಿಗ್ವಿಜಯದ ಮುನ್ಸೂಚನೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ನವೆಂಬರ್ 2024, 9:21 IST
Last Updated 23 ನವೆಂಬರ್ 2024, 9:21 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಎಲ್ಲ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್, ಶಿಗ್ಗಾವಿಯಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಜಯಭೇರಿ ಮೊಳಗಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಸಿಎಂ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.