ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ಅವರ ಕಾರ್ಯಾಲಯ ‘ಎಕ್ಸ್’ ತಾಣದಲ್ಲಿ ಹಂಚಿಕೊಂಡಿದೆ.
ರಾಯಚೂರಿನಲ್ಲಿ ಏಮ್ಸ್ ನಿರ್ಮಾಣ ಸಂಬಂಧ ಈ ಹಿಂದೆ ರಾಜ್ಯ, ಕೇಂದ್ರ ಸಚಿವರನ್ನು ಒಳಗೊಂಡ ‘ಏಮ್ಸ್ ಹೋರಾಟ ಸಮಿತಿ’ಯು ಮಾಂಡವೀಯ ಅವರನ್ನು ಈ ಹಿಂದೆ ಭೇಟಿ ಮಾಡಿದ್ದಾಗಿಯೂ, ಅದಕ್ಕೆ ಅವರು ಪೂರಕವಾಗಿ ಸ್ಪಂದಿಸುವುದಾಗಿಯೂ ಹೇಳಿದ್ದನ್ನು ಸಿದ್ದರಾಮಯ್ಯ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ ಅಲ್ಲಿ ಏಮ್ಸ್ ಸ್ಥಾಪನೆಯಾದರೆ ಹಿಂದುಳಿದ ಪ್ರದೇಶದ ಆರೋಗ್ಯ ವ್ಯವಸ್ಥೆ ಸುಧಾರಿಸಲಿದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಜತೆಗೆ ಏಮ್ಸ್ ಸ್ಥಾಪನೆಗೆ ಕರ್ನಾಟಕ ಸರ್ಕಾರದಿಂದ ಎಲ್ಲಾ ಸಹಾಯ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿಗಳು, ಸಕಾರಾತ್ಮಕ ಸ್ಪಂದನೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.