ಬೆಂಗಳೂರು: ಪೌರಕಾರ್ಮಿಕರು ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಗೌರವ ತುಂಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಇಂದು ಬೆಳಗಿನ ಉಪಾಹಾರವನ್ನು ಪೌರಕಾರ್ಮಿಕರೊಂದಿಗೆ ಮುಖ್ಯ ಮಂತ್ರಿಗಳು ಸೇವಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪೌರಕಾರ್ಮಿಕರಿಗೆ ಸೇವಾ ಭದ್ರತೆ ಇರದಿದ್ದ ಕಾರಣ ಸಮಿತಿ ರಚಿಸಲಾಗಿತ್ತು. ಸಮಿತಿಯ ಶಿಫಾರಸ್ಸಿನಂತೆ ಹಂತ ಹಂತವಾಗಿ ಸುಮಾರು 43 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶಿಸಲಾಗಿತ್ತು. ಅದರ ಮೊದಲ ಕಂತಾಗಿ 11,137 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ. 2 ನೇ ಹಾಗೂ 3 ನೇ ಕಂತಿನಲ್ಲಿ ಪೂರ್ತಿ ಮಾಡಲಾಗುವುದು ಎಂದರು.
ಸರ್ಕಾರದ ಈಉಪಕ್ರಮದಿಂದಈ ವರ್ಗದ ಜನರಲ್ಲಿ ಆತ್ಮವಿಶ್ವಾಸ ತುಂಬಿದೆ. ಇಷ್ಟು ವರ್ಷದ ನಮ್ಮ ಕಠಿಣ ಪರಿಶ್ರಮಕ್ಕೆ ನ್ಯಾಯ ಸಿಕ್ಕಿರುವ ಭಾವನೆ ಇದೆ. ಮಾನವೀಯತೆಯಿಂದ ಅವರ ಭಾವನೆಗಳಿಗೆ ಗೌರವ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.