ಬೆಂಗಳೂರು: ರಾಜ್ಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವುದು ದಾಳಿಯಲ್ಲ. ತಹಶೀಲ್ದಾರರ ಮೂಲಕ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಘಟನೆಯ ಬಗ್ಗೆ ಲಭ್ಯವಾಗಿರುವ ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿತ್ತು. ಪೊಲೀಸರು ಆ ಕೆಲಸ ಮಾಡಿದ್ದಾರೆ. ಈವರೆಗೆ ಎಷ್ಟು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದನ್ನು ಪೊಲೀಸರಿಂದ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.