ADVERTISEMENT

₹1,400 ಕೋಟಿ ದಾಟಿದ ಡಿ.ಕೆ.ಶಿವಕುಮಾರ್‌ ಆಸ್ತಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 7:54 IST
Last Updated 18 ಏಪ್ರಿಲ್ 2023, 7:54 IST
ಡಿ.ಕೆ ಶಿವಕುಮರ್‌
ಡಿ.ಕೆ ಶಿವಕುಮರ್‌    

ರಾಮನಗರ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೋಟಿ ಕುಳಗಳ ಸ್ಪರ್ಧೆ ಗಮನ ಸೆಳೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ₹1,414 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಶಿವಕುಮಾರ್ ಸೋಮವಾರ ಕನಕಪುರದಲ್ಲಿ ನಾಮಪತ್ರ ಸಲ್ಲಿಕೆ ವೇಳೆ 108 ಪುಟಗಳಲ್ಲಿ ಆಸ್ತಿ ವಿವರ ನೀಡಿದ್ದಾರೆ. ಅದರಂತೆ ಡಿಕೆಶಿ ಅವರ ವೈಯಕ್ತಿಕ ಆಸ್ತಿಯೇ ₹1,214 ಕೋಟಿ ದಾಟಿದೆ. ಅವರ ಪತ್ನಿ ಉಷಾ ₹133 ಕೋಟಿ ಹಾಗೂ ಪುತ್ರ ಆಕಾಶ್‌ ₹66 ಕೋಟಿ ಆಸ್ತಿ ಹೊಂದಿದ್ದಾರೆ.

2013ರಲ್ಲಿ ಡಿಕೆಶಿ ಕುಟುಂಬದ ಆದಾಯವು ₹252 ಕೋಟಿ ಇದ್ದು, 2018ರಲ್ಲಿ ಅದು ₹840 ಕೋಟಿಗೆ ಏರಿಕೆ ಆಗಿತ್ತು. ಸದ್ಯ ಅವರ ಮೇಲೆ ವಿವಿಧ ಕ್ರಿಮಿನಲ್‌ ಪ್ರಕರಣಗಳೂ ಸೇರಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

ADVERTISEMENT

ಕೆಪಿಸಿಸಿ ಅಧ್ಯಕ್ಷರ ಬಳಿ ₹970 ಕೋಟಿಯಷ್ಟು ಸ್ಥಿರಾಸ್ತಿ, ₹244 ಕೋಟಿ ಚರಾಸ್ತಿ ಇದ್ದು, ₹226 ಕೋಟಿ ಸಾಲವನ್ನೂ ಹೊಂದಿದ್ದಾರೆ. ಡಿಕೆಶಿ ಬಳಿ ₹23 ಲಕ್ಷ ಮೌಲ್ಯದ ಯೂಬ್ಲೆಟ್‌ ವಾಚ್‌ ಸಹ ಇದ್ದು, ಅವರು ಸದ್ಯ ವರ್ಷಕ್ಕೆ ₹14 ಕೋಟಿಯಷ್ಟು ಆದಾಯ ಗಳಿಸುತ್ತಿದ್ದಾರೆ. ಕುಟುಂಬದವರಲ್ಲಿ 4 ಕೆ.ಜಿ.ಯಷ್ಟು ಬಂಗಾರದ ಸಂಗ್ರಹವೂ ಇದೆ. ರಾಜ್ಯದ ವಿವಿಧೆಡೆ ಕೃಷಿ, ಕೃಷಿಯೇತರ ಜಮೀನು, ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.