ಬೆಂಗಳೂರು: ಚುನಾವಣೆ ಮುಗಿದು ಎರಡು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ವಿರುದ್ದ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ಸರಣಿ ಪ್ರಶ್ನೆಗಳನ್ನು ಕೇಳಿ, ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದಿರುವುದಕ್ಕೆ ಇದೇ ಕಾರಣವೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ ಎಂದು ಪ್ರಶ್ನಿಸಿರುವ ಕಾಂಗ್ರೆಸ್, 66 ಶಾಸಕರಲ್ಲಿ ಯಾರಿಗೂ ಯೋಗ್ಯತೆ ಇಲ್ಲವೇ ಎಂದು ಕುಹಕವಾಡಿದೆ.
ಈ ಬಗ್ಗೆ ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ.
‘ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 2 ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು?
ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ?
66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?
ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?
ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ?
ನಮ್ಮ ಸರ್ಕಾರವನ್ನು ವಿರೋಧಿಸಲು ಸಕಾರಣಗಳು ಸಿಗುವುದಿಲ್ಲ ಎಂಬ ನಿರಾಸೆಯೇ?
ಸೋಲಿನ ಅಘಾತದಿಂದ ಇನ್ನೂ ಸುಧಾರಿಸಿಕೊಂಡಿಲ್ಲವೇ?
ಶಾಸನ ಸಭೆಯ ಪಟ್ಟುಗಳು, ನೀತಿ ನಿಯಮಗಳು ತಿಳಿದಿರುವಂತ ನಾಯಕರ ಕೊರತೆಯೇ?
ಸಂತೋಷ್ vs ಯಡಿಯೂರಪ್ಪನವರ ಆಂತರಿಕ ಯುದ್ಧದ ಪರಿಣಾಮವೇ?
ಕಾರಣವೇನು ಎನ್ನುವುದನ್ನದರೂ ರಾಜ್ಯದ ಜನತೆಗೆ ತಿಳಿಸಲಿ‘
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.