ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 85 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,686ಕ್ಕೆ ಏರಿದ್ದು,70 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.24 ಗಂಟೆಗಳಲ್ಲಿ 7,171 ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರು ನಗರದಲ್ಲಿ 82 ಪ್ರಕರಣ, ವಿಜಯಪುರದಲ್ಲಿ 1 ಮತ್ತು ತುಮಕೂರಿನಲ್ಲಿ 2 ಪ್ರಕರಣ ದಾಖಲಾಗಿವೆ.
ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.18ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 1.04ರಷ್ಟಿದೆ.
ನಿನ್ನೆ ರಾಜ್ಯದಲ್ಲಿ 64 ಪ್ರಕರಣಗಳು ದಾಖಲಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.