ADVERTISEMENT

ಕಾವೇರಿ ವಿವಾದ, ಬರ ಘೋಷಣೆ; ಕೇಂದ್ರದಿಂದ ಉತ್ತರ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2023, 10:31 IST
Last Updated 9 ಸೆಪ್ಟೆಂಬರ್ 2023, 10:31 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸಮಯ ಕೋರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ. ಇದಲ್ಲದೆ ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಇದಕ್ಕೂ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆಯನ್ನು ಸಿಎಂ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ADVERTISEMENT

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸಮಯ ಕೋರಿ ಪತ್ರ ಬರೆಯಲಾಗಿದೆ, ಆದರೆ ಈವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ. ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಆಗ್ರಹಿಸಿದ್ದಾರೆ.

ಜಿ20 ಶೃಂಗಸಭೆ: ಖರ್ಗೆಗೆ ಆಹ್ವಾನಿವಿಲ್ಲ - ಸಿಎಂ ಖಂಡನೆ

ಜಿ20 ಶೃಂಗಸಭೆಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದಿರುವುದು ತಪ್ಪು ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.