ಬೆಂಗಳೂರು: ‘ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅಧ್ಯಕ್ಷರ ಆಯ್ಕೆ ಸಮಿತಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಹೊರಗುಳಿದಿದ್ದಾರೆ’ ಎಂದು ಇಂಧನ ಇಲಾಖೆ ಹೇಳಿದೆ.
‘ಹಿತಾಸಕ್ತಿ ಸಂಘರ್ಷದಲ್ಲಿ ಸಿ.ಎಸ್’ ಕುರಿತ ಸುದ್ದಿಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಸ್ಪಷ್ಟನೆ ನೀಡಿದ್ದಾರೆ. ‘ಆಯ್ಕೆ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷರಾಗಿರುತ್ತಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಧ್ಯಕ್ಷರು ಅಥವಾ ಕೇಂದ್ರ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರು ಸದಸ್ಯರಾಗಿರುತ್ತಾರೆ. ಅಧ್ಯಕ್ಷರ ಅವಧಿ ಮುಗಿದ ಮೂರು ತಿಂಗಳ ಒಳಗಾಗಿ ಹೊಸ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ವಿದ್ಯುಚ್ಛಕ್ತಿ ಕಾಯ್ದೆ–2003ರ ಹೇಳಿದೆ. ಕೆಇಆರ್‌ಸಿ ಅಧ್ಯಕ್ಷರ ಆಯ್ಕೆ ಸಮಿತಿಯ ಸಭೆಯಲ್ಲಿ ಹಾಜರಿದ್ದ ಮುಖ್ಯ ಕಾರ್ಯದರ್ಶಿಯ ಹಾಜರಿದ್ದರು. ಅಧ್ಯಕ್ಷರ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿತ್ತು’ ಎಂದು ಹೇಳಿದ್ದಾರೆ.
‘ಆ ಬಳಿಕ, ಕೆಇಆರ್‌ಸಿ ಅಧ್ಯಕ್ಷಸ್ಥಾನಕ್ಕೆ ಅರ್ಜಿ ಸಲ್ಲಿಸಲು ಬಯಸಿದ ಮುಖ್ಯಕಾರ್ಯದರ್ಶಿ, ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ಅವರನ್ನು ಬಿಟ್ಟು,ಸಮಿತಿಯು ಮುಂದಿನ ಕಾರ್ಯಗಳು ನಡೆಸುತ್ತಿದೆ. ಹೀಗಾಗಿ, ಇದರಲ್ಲಿ ಹಿತಾಸಕ್ತಿ ಸಂಘರ್ಷ ಇಲ್ಲ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.