ADVERTISEMENT

ವೈದ್ಯಕೀಯ ಸೀಟು ಸಿಗದವರ ಶುಲ್ಕ ವಾಪಸ್ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 15:12 IST
Last Updated 21 ನವೆಂಬರ್ 2024, 15:12 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಸಿಗದ 4,897 ವಿದ್ಯಾರ್ಥಿಗಳು ಪಾವತಿಸಿದ್ದ ಶುಲ್ಕ ಹಾಗೂ ಮುಂಗಡ ಠೇವಣಿ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಂದಿರುಗಿಸಿದೆ.

‘ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕೂ ಮೊದಲು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಶುಲ್ಕವನ್ನು ಮುಂಗಡವಾಗಿ ಪಡೆಯಲಾಗಿತ್ತು. ನಂತರ ಆಪ್ಷನ್‌ ದಾಖಲಿಸಲು ಅವಕಾಶ ನೀಡಲಾಗಿತ್ತು. ಸೀಟು ಸಿಗದವರ ಶುಲ್ಕ ಹಿಂದಿರುಗಿಸಲಾಗಿದೆ. ಇನ್ನೂ 160 ವಿದ್ಯಾರ್ಥಿಗಳು ಬ್ಯಾಂಕ್‌ನ ಐಎಫ್‌ಎಸ್‌ಸಿ ಕೋಡ್‌ ತಪ್ಪಾಗಿ ನಮೂದಿಸಿದ್ದಾರೆ. ಅಂತಹವರಿಗೆ ಹಣ ಹಿಂದಿರುಗಿಸಲಾಗಿಲ್ಲ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.

ADVERTISEMENT

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಆಪ್ಷನ್‌ ದಾಖಲಿಸಲು ನ. 22 ಕೊನೆಯ ದಿನವಾಗಿದೆ.

ಪಿ.ಜಿ ಆಯುಷ್‌ 2ನೇ ಸುತ್ತು: ಪಿ.ಜಿ ಆಯುಷ್‌ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನ. 23ರ ಒಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡು ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು. ಈ ಹಿಂದಿನ ಸುತ್ತಿನಲ್ಲಿ ಶುಲ್ಕ ಪಾವತಿಸಿದ್ದವರಿಗೆ  ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಹೊಂದಾಣಿಕೆ ಮಾಡಲಾಗುತ್ತಿದೆ. ಬಿ.ಎಸ್‌ಸಿ ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ನ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ನ. 26ರೊಳಗೆ ಶುಲ್ಕ ಪಾವತಿಸಿ, ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.