ಬೆಂಗಳೂರು:ವೈಕುಂಠ ಏಕಾದಶಿ ಮತ್ತು ಸಂಕ್ರಾತಿ ಹಬ್ಬಗಳಿಗೆ ಪ್ರತ್ಯೇಕ ಆದೇಶ ಹೊರಡಿಸಲಾಗಿದ್ದು, ಇವೆರಡೂ ಹಬ್ಬಗಳ ಪ್ರಯುಕ್ತ ಶಾಸ್ತ್ರ– ಸಂಪ್ರದಾಯಗಳ ಪ್ರಕಾರ, ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯ ನಡೆಸಲು ಅನುಮತಿ ನೀಡಲಾಗಿದೆ.
ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್–19 ಲಿಸಿಕೆ ಎರಡು ಡೋಸ್‌ಗಳನ್ನು ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ನೀಡಬೇಕು. ಯಾವುದೇ ಸೇವೆ, ಇತ್ಯಾದಿಗಳಿಗೆ ಅವಕಾಶವಿಲ್ಲ.
ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆಯೂ ಇಲ್ಲ. ಬಿಬಿಎಂಪಿ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.