ADVERTISEMENT

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 12:35 IST
Last Updated 21 ಅಕ್ಟೋಬರ್ 2023, 12:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

ಯುಜಿಸಿ, ಎಐಸಿಟಿಇ, ಐಸಿಎರ್‌ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4ರಷ್ಟು ಹೆಚ್ಚಿಸಿ (ಶೇ 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.