ADVERTISEMENT

ತಾ.ಪಂ, ಜಿ. ಪಂ. ಚುನಾವಣೆ ಅಧಿಸೂಚನೆ: ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 20:05 IST
Last Updated 1 ಮಾರ್ಚ್ 2023, 20:05 IST
   

ಬೆಂಗಳೂರು: ’ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಪಂಚಾಯತ್‌ ರಾಜ್ ಸೀಮಾ ನಿರ್ಣಯ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಗೆಜೆಟ್ ಅಧಿ
ಸೂಚನೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅನುಪಾಲನಾ ವರದಿ ಸಲ್ಲಿಸಿದರು. 2022ರ ಡಿಸೆಂಬರ್ 14ರಂದು ಹೈಕೋರ್ಟ್‌ ಹೊರಡಿಸಿದ ಆದೇಶವನ್ನು ಪಾಲಿಸಲಾಗಿದ್ದು, ಅದರ ಅನುಸಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ’ ಎಂದರು.

ADVERTISEMENT

‘ಚುನಾವಣೆಗೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಹೈಕೋರ್ಟ್‌ ವಿಧಿಸಿದ್ದ ₹ 5 ಲಕ್ಷ ದಂಡದಲ್ಲಿ ತಲಾ ₹ 2 ಲಕ್ಷ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ಪಾವತಿಸಲಾಗಿದೆ. ₹ 1 ಲಕ್ಷ ಮೊತ್ತವನ್ನು ರಾಜ್ಯ ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪಾವತಿಸಲಾಗಿದೆ’ ಎಂದು ಪಾವತಿ ರಸೀದಿಗಳನ್ನುನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಪರಹಾಗೂ ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ಕೋರಿಕೆಯಂತೆ ವಿಚಾರಣೆಯನ್ನು ಗುರುವಾರಕ್ಕೆ (ಮಾ.2) ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.