ADVERTISEMENT

ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ; ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು; ಡಿಕೆಶಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 9:38 IST
Last Updated 2 ಸೆಪ್ಟೆಂಬರ್ 2024, 9:38 IST
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಶಾಸಕ ಆರ್.ವಿ. ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ, ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೊ ಅದನ್ನು ನೀಡೋಣ’ ಎಂದರು.

‘ನ್ಯಾಯಲಯದಲ್ಲಿ ಸಿದ್ದರಾಮಯ್ಯ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು’ ಎಂಬ ಪ್ರಶ್ನೆಗೆ, ‘ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ’ ಎಂದರು.

ADVERTISEMENT

ಡಾ. ಕೆ. ಸುಧಾಕರ್ ಪ್ರಮಾಣಪತ್ರ ನೀಡಲಿ: ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಕಾಂಗ್ರೆಸ್‌ನವರು ಸತ್ಯಹರಿಶ್ಚಂದ್ರರೇ?’ ಎಂದು ಪ್ರಶ್ನಿಸಿದ ಬಗ್ಗೆ ಕೇಳಿದಾಗ, ‘ಕಾಂಗ್ರೆಸ್‌ನಲ್ಲಿದ್ದು ಈಗ ಬಿಜೆಪಿಗೆ ಹೋಗಿರುವ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ’ ಎಂದರು.

‘ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ’ ಎಂದರು.

ಯಡಿಯೂರಪ್ಪ ವಿರುದ್ದ ದಾಖಲಾಗಿರುವ ಪೋಕ್ಸೊ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಕೇಳಿದಾಗ, ‘ಈ  ಮಾಹಿತಿಯಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.