ADVERTISEMENT

ಸಿ.ಎಂ ಕುರ್ಚಿಗೆ ಯತ್ನ ತಪ್ಪೇನಿಲ್ಲ ಎಂದಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 23:28 IST
Last Updated 9 ಅಕ್ಟೋಬರ್ 2024, 23:28 IST
<div class="paragraphs"><p>ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ </p></div>

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ

   

–ಪ್ರಜಾವಾಣಿ ಚಿತ್ರ/ಕೃಷ್ಣಕುಮಾರ್ ಪಿ. ಎಸ್.

ಬೆಂಗಳೂರು: ‘ಕಾಂಗ್ರೆಸ್‌ನಲ್ಲಿ ಬೇರೆ ಯಾರಾದರೂ ಮುಖ್ಯಮಂತ್ರಿ ಆಗುವ ಪ್ರಯತ್ನ ನಡೆಸಿದ್ದರೆ ನಡೆಸಲಿ ಎಂದು ನಾನು ಹೇಳಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

‘ಸಿ.ಎಂ ಕುರ್ಚಿಗೆ ಯತ್ನ ತಪ್ಪೇನಿಲ್ಲ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ವರದಿಗೆ ಸಂಬಂಧಿಸಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಹವಣಿಸುತ್ತಿದ್ದೇನೆ ಎಂಬುದು ಸರಿಯಲ್ಲ ಎಂದು ನಾನು ಹೇಳಿದ್ದಾಗಿ ವರದಿಯಲ್ಲಿದೆ. ಅಂತಹ ಮಾತುಗಳನ್ನು ನಾನು ಆಡಿಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬೆಳಗಾವಿಯ ಚನ್ನಮ್ಮನ ಕಿತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದೆ. ಮುಖ್ಯಮಂತ್ರಿ ಹುದ್ದೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾರ‍್ಯಾರು ಏನೇನು ಪ್ರಯತ್ನ ನಡೆಸುತ್ತಿದ್ದಾರೋ ಅದು ಅವರ ವೈಯಕ್ತಿಕ ವಿಷಯ. ಪಕ್ಷದ ಹಂತದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದೆ. ಅದನ್ನು ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ನಮಗೆ ಸಿಕ್ಕಿರುವ ಅವಕಾಶದಲ್ಲಿ ಕೆಲಸ ಮಾಡಬೇಕು. ನನ್ನ ಪಕ್ಷ ನನ್ನನ್ನು ವೈಯಕ್ತಿಕವಾಗಿ, ಗೌರವಯುತವಾಗಿ ನಡೆಸಿಕೊಂಡಿದೆ. ಕೈತುಂಬಾ ಕೆಲಸ ಕೊಟ್ಟಿದ್ದು, 48 ಗಂಟೆ ಇದ್ದರೂ ಸಾಲುವುದಿಲ್ಲ. ಜನರಿಗೆ ಕೈಲಾದಷ್ಟು ಅಳಿಲು ಸೇವೆ ಮಾಡಿದರೆ ಅದೇ ನನ್ನ ಸೌಭಾಗ್ಯ. ಪಕ್ಷ ಹಾಗೂ ಮುಖ್ಯಮಂತ್ರಿಯವರು ನೀಡಿರುವ ಕೆಲಸ ಮಾಡುವುದಕ್ಕಿಂತ ಬೇರೆ ಯಾವುದೇ ಆಸೆ ನನಗಿಲ್ಲ ಎಂದಷ್ಟೇ ನಾನು  ಹೇಳಿದ್ದೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.