ADVERTISEMENT

Karnataka Cabinet Reshuffle: ಸಂಪುಟ ಪುನರ್‌ ರಚನೆಗೆ ‘ಕೈ’ ವರಿಷ್ಠರ ಚಿಂತನೆ?

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 3:09 IST
Last Updated 13 ಆಗಸ್ಟ್ 2024, 3:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂಬ ಚರ್ಚೆ ಕಾಂಗ್ರೆಸ್‌ ವಲಯದಲ್ಲಿ ದಟ್ಟವಾಗಿದೆ.

ಕೆಲವು ಹಿರಿಯ ಸಚಿವರು ತಮ್ಮ ಖಾತೆ ಬದಲಿಸುವಂತೆ ಪಟ್ಟು ಹಿಡಿದಿದ್ದು, ಸಂಪುಟ ಪುನರ್‌ ರಚನೆಯ ಜೊತೆಗೆ ಖಾತೆಗಳ ಬದಲಾವಣೆಗೂ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ADVERTISEMENT

ಸಚಿವರ ಕಾರ್ಯಕ್ಷಮತೆ ಆಧಾರವಾಗಿಟ್ಟು ಕೆಲವರನ್ನು ಕೈಬಿಡಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಎಲ್ಲ ಸಚಿವರು ತಮ್ಮ ತಮ್ಮ ಇಲಾಖೆಗಳಲ್ಲಿ ಸಾಧಿಸಿರುವ ಪ್ರಗತಿಯ ವರದಿಯನ್ನು ಈಗಾಗಲೇ ತರಿಸಿಕೊಂಡಿರುವ ಹೈಕಮಾಂಡ್ ನಾಯಕರು, ವರ್ಷಾಂತ್ಯದೊಳಗೆ ಸಂಪುಟ ಪುನರ್‌ ರಚನೆ ಮಾಡುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಸಭೆ ಇಂದು: ಎಲ್ಲ ರಾಜ್ಯಗಳ ಕಾಂಗ್ರೆಸ್‌ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಸಭೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಮಂಗಳವಾರ (ಆಗಸ್ಟ್‌ 13) ನಡೆಯಲಿದೆ. 

ಸುದ್ದಿಗಾರರಿಗೆ ಸೋಮವಾರ ಈ ವಿಷಯ ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ಸಭೆಯಲ್ಲಿ ಭಾಗವಹಿಸಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಮಂಗಳವಾರ ಸಂಜೆ ಅಥವಾ ಬುಧವಾರ ವಾಪಸಾಗುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.