ADVERTISEMENT

ದರ್ಶನ್‌ಗೆ ಮಧ್ಯಂತರ ಜಾಮೀನು: ತಡೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2024, 8:11 IST
Last Updated 15 ನವೆಂಬರ್ 2024, 8:11 IST
   

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಮ್ಮತಿ ನೀಡಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದರು.‌ ಆಗ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್‌ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು‌ ಮಂಜೂರು ಮಾಡಿತ್ತು. ‌ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಈ ಮಧ್ಯೆ ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂ‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಗೃಹ ಇಲಾಖೆ ಇದೀಗ ಸಮ್ಮತಿ ನೀಡಿದೆ.

ADVERTISEMENT

ಗೃಹ ಇಲಾಖೆ ಅನುಮತಿ ನೀಡಿರುವ ವಿಚಾರವನ್ನು ನಗರದ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಚಿತ ಪಡಿಸಿದರು. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು. ಸಿದ್ಧತೆ ನಡೆದಿದೆ ಎಂದು ದಯಾನಂದ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.