ಬೆಂಗಳೂರು: ಬೀದರ್‌ನ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ಪಟ್ಟಿ ತಡೆಹಿಡಿಯುವಂತೆ ಸಮಾಜ ಕಲ್ಯಾಣ ಇಲಾಖೆ ಕುಲಸಚಿವರಿಗೆ ಪತ್ರ ಬರೆದಿದೆ.
ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಬೋಧಕ ವೃಂದದ 22 ಬ್ಯಾಕ್‌ಲಾಗ್ ಹುದ್ದೆಗಳಿಗೆ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಬ್ಯಾಕ್‌ಲಾಗ್ ಅಧಿನಿಯಮವನ್ನು ಪಾಲಿಸದೇ ಆಯ್ಕೆ ಮಾಡಿಲಾಗಿದೆ. ಪಟ್ಟಿಯನ್ನು ರದ್ದು ಮಾಡಿ ಹೊಸದಾಗಿ ಆಯ್ಕೆ ಮಾಡಬೇಕು ಎಂದು ಭಾರತೀಯ ರಿಪಬ್ಲಿಕ್ ಪಕ್ಷದ ಅಧ್ಯಕ್ಷ ವೆಂಕಟಸ್ವಾಮಿ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ರಕ್ಷಣಾ ಒಕ್ಕೂಟದ ಎಚ್.ಇಂದ್ರಯ್ಯ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿದ್ದರು.
ದಾಖಲೆಗಳನ್ನು ಪರಿಶೀಲಿಸಿರುವ ಸಮಾಜ ಕಲ್ಯಾಣ ಇಲಾಖೆ ಆಯ್ಕೆ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಪಟ್ಟಿ ಮಾಡಿದ್ದು, ನ್ಯೂನತೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು ಅಂತಿಮ ಆಯ್ಕೆಪಟ್ಟಿ ಪ್ರಕಟಿಸುವಂತೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.