ADVERTISEMENT

ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಕಾಯ್ದೆ ತಿದ್ದುಪಡಿ;ಅಂಕಿತ ಮಾತ್ರ ಬಾಕಿ:ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 6:36 IST
Last Updated 17 ಆಗಸ್ಟ್ 2024, 6:36 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಮಂಗಳೂರು: ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದ್ದು, ರಾಜ್ಯಪಾಲರ ಅಂಕಿತ ಬಾಕಿ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು‌.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಘಟನೆ ಆತಂಕ ಮೂಡಿಸಿದೆ. ಈ ಕಾರಣಕ್ಕೆ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ಸ್ವಲ್ಪ ಮಟ್ಟಿಗೆ ಸಾರ್ವಜನಿಕ ರಿಗೆ ತೊಂದರೆಯಾಗಬಹುದು. ಆದರೆ ಎಲ್ಲ ತುರ್ತು ಸೇವೆಗಳು ಲಭ್ಯ‌ಇರುತ್ತವೆ ಎಂದರು.

ವೈದ್ಯರು, ಆಸ್ಪತ್ರೆ ‌ಸಿಬ್ಬಂದಿ ರಾತ್ರಿಯಿಡೀ ಕೆಲಸ ಮಾಡುತ್ತಾರೆ.‌ ಮಹಿಳಾ ಸಿಬ್ಬಂದಿ ಕೂಡ ಇರುತ್ತಾರೆ. ಎಲ್ಲರ ಸುರಕ್ಷತೆಯೂ ಮುಖ್ಯವಾಗಿದೆ. ಸುರಕ್ಷತೆ ಎನ್ನುವುದು ಆಸ್ಪತ್ರೆ ನಡೆಸುವವರ ಜವಾಬ್ದಾರಿಯೂ ಆಗಿದೆ. ಆಸ್ಪತ್ರೆ ವೈದ್ಯರು, ನರ್ಸ್, ಸಿಬ್ಬಂದಿ‌ ಸುರಕ್ಷತೆಗೆ ಚರ್ಚಿಸಲು ಮಂಗಳವಾರ ಎಲ್ಲ‌ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆಯಲಾಗಿದೆಕರೆಯಲಾಗಿದೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.