ADVERTISEMENT

ಎಲ್ಎಲ್‌ಬಿ ಪರೀಕ್ಷೆ ನಡೆಸಲು ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 18:50 IST
Last Updated 17 ಫೆಬ್ರುವರಿ 2022, 18:50 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:‘ಮೂರು ವರ್ಷದ ಎಲ್ಎಲ್‌ಬಿ ಕೋರ್ಸ್‌ನ 2 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿ’ ಎಂದುಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಹಾಗೂ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ಧ ವಿಭಾಗೀಯ ನ್ಯಾಯಪೀಠ ಈ ಕುರಿತ ತೀರ್ಪು ಪ್ರಕಟಿಸಿದೆ. ‘ಪರೀಕ್ಷೆಯನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ವಿಶ್ವವಿದ್ಯಾಲಯ 10 ದಿನಗಳಲ್ಲಿ ನಿರ್ಧರಿಸಿ, 3 ವರ್ಷದ ಎಲ್ಎಲ್‌ಬಿಯ 2 ಮತ್ತು 4ನೇ ಸೆಮಿಸ್ಟರ್‌ಗಳಿಗೆ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು‘ ಎಂದು ನ್ಯಾಯ‍ಪೀಠ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT