LIVE | ಹಿಜಾಬ್ ನಿರ್ಬಂಧದ ಆದೇಶ ಎತ್ತಿಹಿಡಿದ ಹೈಕೋರ್ಟ್: ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ
ಹಿಜಾಬ್ ನಿರ್ಬಂಧ ವಿವಾದಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಲಾಗಿರುವ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಬೆಳಿಗ್ಗೆ 10.30ಕ್ಕೆ ಪ್ರಕಟಿಸಿದ್ದು, ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿದೆ. ಜತೆಗೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.
ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 13:49 IST
Last Updated 15 ಮಾರ್ಚ್ 2022, 13:49 IST
ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ವಿದ್ಯಾರ್ಥಿನಿ
ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪು ಅಸಂವಿಧಾನಿಕ ಎಂದ ಸಿಎಫ್‌ಐ
ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಹೋಗುವ ಬಗ್ಗೆ ಶೀಘ್ರ ನಿರ್ಧಾರ– ವಕೀಲರು
ಹಿಜಾಬ್: ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ರಾಷ್ಟ್ರೀಯ ಮಹಿಳಾ ಆಯೋಗ
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂಗಳಾದ ಒಮರ್ ಅಬ್ದುಲ್ಲಾ-ಮೆಹಬೂಬಾ ಮುಫ್ತಿ ಅಸಮಾಧಾನ
ಹಿಜಾಬ್ ಅನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ: ಸಂಶಯ ವ್ಯಕ್ತಪಡಿಸಿದ ಹೈಕೋರ್ಟ್
‘ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.
ಹೈಕೋರ್ಟ್‌ನಿಂದ ಐತಿಹಾಸಿಕ ತೀರ್ಪು: ಯಶ್‌ಪಾಲ್ ಸುವರ್ಣ
ಕೋಮು ಸೌಹಾರ್ದ, ಕಾನೂನು ಸುವ್ಯವಸ್ಥೆ ಈಗ ಸರ್ಕಾರದ ಹೊಣೆ: ಡಿ.ಕೆ. ಶಿವಕುಮಾರ್
ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತನ್ನ ತೀರ್ಪನ್ನೇನೋ ನೀಡಿದೆ. ಆದರೆ, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ADVERTISEMENT
ಹಿಜಾಬ್ ತೀರ್ಪು: ವಿಜಯಪುರ ಶಾಲಾ, ಕಾಲೇಜುಗಳ ಬಳಿ ಪೊಲೀಸ್ ಭದ್ರತೆ
ಹಿಜಾಬ್ ತೀರ್ಪು ಸಂವಿಧಾನಕ್ಕೆ ದೊರೆತ ಜಯ: ಶಾಸಕ ರಘುಪತಿ ಭಟ್
ಶಿಕ್ಷಣಕ್ಕೆ ಗಮನ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಅಶ್ವತ್ಥನಾರಾಯಣ ಕಿವಿಮಾತು
ಹಿಜಾಬ್ ತೀರ್ಪು: ಶಿವಮೊಗ್ಗದ ಶಾಲಾ, ಕಾಲೇಜುಗಳ ಬಳಿ ಕಟ್ಟೆಚ್ಚರ
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಸ್ಥಳ, ಶಾಲಾ, ಕಾಲೇಜು ಆವರಣಗಳಲ್ಲಿ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ.
ಹಿಜಾಬ್ ತೀರ್ಪು: ಯಾದಗಿರಿಯಲ್ಲಿ ಪಿಯು ಪರೀಕ್ಷೆ ನಿರಾಕರಿಸಿದ ವಿದ್ಯಾರ್ಥಿನಿಯರು
ಯಾದಗಿರಿಯ ಸುರಪುರ ತಾಲ್ಲೂಕಿನ ಕೆಂಭಾವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಏಂಟು ಜನ ವಿದ್ಯಾರ್ಥಿನಿಯರು ಪರೀಕ್ಷೆ ತೊರೆದು ಮನೆಗೆ ಮರಳಿದ್ದಾರೆ.
ಹಿಜಾಬ್ ಕುರಿತ ತೀರ್ಪಿನ ಬಗ್ಗೆ ಯಾರು ಏನಂದರು?
ಹಿಜಾಬ್ ಕುರಿತ ತೀರ್ಪಿನ ಬಗ್ಗೆ ಯಾರು ಏನಂದರು? ಇಲ್ಲಿದೆ ಓದಿ;
ಹಿಜಾಬ್ ತೀರ್ಪು| ವಿಜಯೋತ್ಸವ, ಸಂಭ್ರಮಾಚರಣೆ ಬೇಡ – ಕಾರ್ಯಕರ್ತರಲ್ಲಿ ಬಿಜೆಪಿ ಮನವಿ
ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ: ಸಚಿವ ಸುಧಾಕರ್
ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಈ ತೀರ್ಪು ಸಮವಸ್ತ್ರದ ಪಾವಿತ್ರ್ಯವನ್ನು ಎತ್ತಿಹಿಡಿದಿದೆ. ಜತೆಗೆ, ಶಾಲೆಗಳು ಮತ್ತು ಕಾಲೇಜುಗಳು ಶಿಕ್ಷಣದತ್ತ ಗಮನಹರಿಸುವಂತೆ ಮಾಡಿದೆ ಎಂದು ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ನ್ಯಾಯಪೀಠ ಹೇಳಿದ್ದೇನು? ಇಲ್ಲಿದೆ ವಿವರ;
ಇಡೀ ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ ಮತ್ತು ಅವುಗಳಿಗೆ ಉತ್ತರಿಸಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ಪೀಠ ಹೇಳಿದೆ.
ಮುಸ್ಲಿಮ್ ಮಹಿಳೆಯರು ಹಿಬಾಜ್ ಧರಿಸುವುದು ಇಸ್ಲಾಮ್‌ನಲ್ಲಿ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಾಲೆಯಲ್ಲಿ ಸಮವಸ್ತ್ರ ಧರಿಸುವಂತೆ ಸೂಚಿಸಿರುವುದು ಒಂದು ಸಮಂಜಸವಾದ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳು ಅದನ್ನು ಆಕ್ಷೇಪಿಸುವಂತಿಲ್ಲ. ಆದೇಶ ಮಾಡಲು ಸರ್ಕಾರಕ್ಕೆ ಅಧಿಕಾರವಿದೆ ಎಂಬ ಉತ್ತರ ಕಂಡುಕೊಂಡಿದ್ದೇವೆ ಎಂದು ತೀರ್ಪು ಪ್ರಕಟಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಹೇಳಿದರು.
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ: ಸಚಿವ ಬಿ.ಸಿ. ನಾಗೇಶ್
ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಇಲ್ಲದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ವಿದ್ಯಾರ್ಥಿ, ಪೋಷಕರಿಗೆ ಮನವಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಹಿಜಾಬ್ ಅಗತ್ಯ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನ್‌ನಲ್ಲಿ ಯಾವುದೇ ಆಧಾರವಿಲ್ಲ: ನ್ಯಾಯಪೀಠ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠದಿಂದ ತೀರ್ಪು
ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ
ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ ಸಾರಾಸಗಟಾಗಿ ತಿರಸ್ಕರಿಸಿದೆ
ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದ ಹೈಕೋರ್ಟ್
ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ
ಹಿಜಾಬ್ ತೀರ್ಪು ಇಂದು; ರಾಜ್ಯದ ಹಲವೆಡೆ ನಿಷೇಧಾಜ್ಞೆ ಜಾರಿ