ADVERTISEMENT

ಮೊಹಮ್ಮದ್‌ ನಲಪಾಡ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 16:07 IST
Last Updated 23 ಫೆಬ್ರುವರಿ 2024, 16:07 IST
ನಲಪಾಡ್‌ ಜಾಮೀನು ಅರ್ಜಿ: ನೋಟಿಸ್‌
ನಲಪಾಡ್‌ ಜಾಮೀನು ಅರ್ಜಿ: ನೋಟಿಸ್‌   

ಬೆಂಗಳೂರು: ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆ ಹೆಸರಿನಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಆರೋಪದಡಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿಯ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT