ADVERTISEMENT

ಪ್ರಚೋದನಕಾರಿ ಹೇಳಿಕೆ ಆರೋಪ: ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 16:08 IST
Last Updated 19 ಸೆಪ್ಟೆಂಬರ್ 2024, 16:08 IST
ಶೋಭಾ ಕರಂದ್ಲಾಜೆ 
ಶೋಭಾ ಕರಂದ್ಲಾಜೆ    

ಬೆಂಗಳೂರು: ‘ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ತಮಿಳುನಾಡಿನ ಜೊತೆಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂಬ ಆರೋಪದಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

‘ನನ್ನ ವಿರುದ್ಧ ಕಾಟನ್‌ಪೇಟೆ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ 5ನೇ ಎಸಿಎಂಎಂ ನ್ಯಾಯಾಲಯದಲ್ಲಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಮಾನ್ಯ ಮಾಡಿದರು.

‘ಇದೇ ಘಟನೆಯ ಬಗ್ಗೆ ಇಂತಹುದೇ ಹೇಳಿಕೆ ನೀಡಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಇದೇ 5ರಂದು ರದ್ದುಗೊಳಿಸಿದೆ. ಹಾಗಾಗಿ, ಮದ್ರಾಸ್ ಹೈಕೋರ್ಟ್‌ ತೀರ್ಪಿನ ಆಧಾರದಡಿ ಈ ಪ್ರಕರಣವನ್ನೂ ರದ್ದುಗೊಳಿಸಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.