ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕಾಗಿ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ ಎಂದರು.
ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು. ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.