ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.
ಈಶ್ವರಪ್ಪ ವಿರುದ್ಧ ದಿಕ್ಕಾರ ಕೂಗಿದ ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಈ ಗದ್ದಲದ ನಡುವೆಯೇ ಪ್ರಶ್ನೋತ್ತರ ನಡೆಯಿತು.
ಬಳಿಕ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 362 ಹುದ್ದೆಗಳಿಗೆ ಆಯ್ಕೆಯಾದವರ ನೇಮಕಾತಿಗೆ ಅವಕಾಶ ಕಲ್ಪಿಸುವ ಮಸೂದೆಯೂ ಸೇರಿ ನಾಲ್ಕು ಮಸೂದೆಗಳಿಗೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು.
ಗದ್ದಲ ಮುಂದುವರಿದ ಕಾರಣ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮಧ್ಯಾಹ್ನ2 ಗಂಟೆಗೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.