ADVERTISEMENT

ಅಬಕಾರಿ ಇಲಾಖೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಆಗ್ರಹ: ನ.20ಕ್ಕೆ ಮದ್ಯ ಮಾರಾಟ ಬಂದ್

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 15:51 IST
Last Updated 14 ನವೆಂಬರ್ 2024, 15:51 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 20ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್‌ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಶಿಯೇಶನ್ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ ‘ಸ್ವಚ್ಛ ಅಬಕಾರಿ ಅಭಿಯಾನ’ದಡಿ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಲಾಗಿದೆ. ಅಬಕಾರಿ ಇಲಾಖೆಯನ್ನು ಆರ್ಥಿಕ ಸಚಿವರೇ ನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಅಬಕಾರಿ ಕಾಯ್ದೆಯ ಕಲಂ 29 ಅನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡಬೇಕು. ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಿಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಿ ಅವಕಾಶ ಒದಗಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.