ಬೆಂಗಳೂರು: ‘ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಮಂಡಿಸಿದ್ದ ವಿಶ್ವಾಸಮತ ನಿರ್ಣಯಕ್ಕೆ ಸೋಲುಂಟಾದ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರೈತಪರ ಸರ್ಕಾರ ಇನ್ನು ಮುಂದೆ ರಾಜ್ಯದಲ್ಲಿ ಆಡಳಿತ ನಡೆಸಲಿದೆ’ ಎಂದು ನುಡಿದರು.
‘ನಾಡಿಗೆ ಅನ್ನ ಕೊಡುವ ಅನ್ನದಾತ ಬರಗಾಲದಿಂದ ತತ್ತರಿಸುತ್ತಿದ್ದಾನೆ. ರೈತ ಸಮುದಾಯಕ್ಕೆ ಬದುಕಿನಲ್ಲಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತೇನೆ. ಇದು ಪ್ರಜಾಪ್ರಭುತ್ವದ ವಿಜಯ. ಜನರು ಕುಮಾರಸ್ವಾಮಿ ಸರ್ಕಾರದಿಂದರೋಸಿ ಹೋಗಿದ್ದರು.ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ ಅಂತ ಜನರಿಗೆ ಭರವಸೆ ಕೊಡುತ್ತೇನೆ’ ಎಂದು ಯಡಿಯೂರಪ್ಪ ನಗುಮೊಗದಿಂದ ಹೇಳಿದರು.
‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.