ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ರಾಜ್ಯಕ್ಕೆ ಬರಲಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತಕ್ಕೆ ನಿರ್ಧರಿಸಿದ್ದು, ಕಾರ್ಯಕರ್ತರಿಗೆ ಸನ್ನದ್ಧರಾಗಲು ಸೂಚಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ‘ನೂತನ ಅಧ್ಯಕ್ಷರು ನವಂಬರ್ 6ಕ್ಕೆ ಬರುವುದಾಗಿ ರಾಷ್ಟ್ರೀಯ ಅಧ್ಯಕ್ಷರು ಸಮಯ ಕೊಟ್ಟಿದ್ದಾರೆ. ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಹಲವು ದಶಕಗಳ ಬಳಿಕ ಕರ್ನಾಟಕದವರು ಅಧ್ಯಕ್ಷರಾಗಿದ್ದಾರೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ’ ಎಂದರು.
ಸ್ವಾಗತ ಸಮಾರಂಭದ ಆಯೋಜನೆ ನಿಟ್ಟಿನಲ್ಲಿ ಪೂರ್ವಸಿದ್ದತೆಗೆ ಬೆಂಗಳೂರಿನಲ್ಲಿ ಭಾನುವಾರ ಸಭೆ ಕರೆದಿದ್ದೇನೆ..
ಪಕ್ಷದ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತಿಯೊಬ್ಬರೂ ಕಾರ್ಯಕರ್ತರೊಡನೆ ಬೆಂಗಳೂರಿಗೆಬರಬೇಕು. ಹೊರಡಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.