ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ತಮ್ಮನ್ನು ಕೈಬಿಟ್ಟು, ವಿಧಾನ ಪರಿಷತ್ ಅಥವಾ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಪರಿಗಣಿಸುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.
‘ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯ ವಿಚಾರದ ನನ್ನ ಹೋರಾಟ ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಶ್ರೇಯೋಭಿವೃದ್ಧಿಗೆ ಮತ್ತು ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದ್ದು, ಈ ಕಾರಣಕ್ಕೆ ನನ್ನ ಮನವಿಯನ್ನು ಪರಿಗಣಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.