ಜಾತ್ಯತೀತ ಜನತಾದಳದ ರಾಷ್ಟ್ರೀಯ ಘಟಕದ ನೂತನ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರಿನ ಕಾಡುಗೊಂಡನಹಳ್ಳಿಯ ಖಾಸಗಿ ಸಭಾಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಈ ಸಂದರ್ಭ ಮಾತನಾಡಿದ ಇಬ್ರಾಹಿಂ , ‘ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್ ಸಖ್ಯ ಬೆಳೆಸುವುದು ಸರಿಯೇ ’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.