ಚಿಕ್ಕನಾಯಕನಹಳ್ಳಿ (ತುಮಕೂರು): ‘ಕಾಂಗ್ರೆಸ್ ಪಕ್ಷಕ್ಕೆ ಹೋಗುವ ದುಸ್ಥಿತಿ ನನಗಿನ್ನೂ ಬಂದಿಲ್ಲ’ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಸೋಮವಾರ ಪ್ರತಿಕ್ರಿಯಿಸಿದ್ದಾರೆ.
‘ನಾನು ಕಾಂಗ್ರೆಸ್‌ಗೆ ಹೋಗುತ್ತೇನೆಂದು ಅಪಪ್ರಚಾರ ನಡೆದಿದೆ. ಮೊದಲಿಂದಲೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದ ನನಗೆ ಅದೇ ಪಕ್ಷಕ್ಕೆ ಹೋಗುವ ದುಸ್ಥಿತಿ ಬಂದಿಲ್ಲ’ ಎಂದು ಅವರು ಹೇಳಿದರು. ‘ಬಿಜೆಪಿ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಂಡಿದೆ. ನನ್ನನ್ನು ಕರೆದು ಮಂತ್ರಿ ಮಾಡಿದೆ. ಪಕ್ಷದ ಋಣ ನನ್ನ ಮೇಲಿದೆ’ ಎಂದು ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.
‘ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ (ಕೊಪ್ಪಳ ವರದಿ): ‘ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಯುತ್ತಿದೆ ಎನ್ನುವುದು ಊಹಾಪೋಹ ಮಾತ್ರ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ತಿಳಿಸಿದರು.
‘ಪ್ರಜಾವಾಣಿ’ಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ನಾನು ಬೇರೆ ಪಕ್ಷಕ್ಕೆ ಹೋಗುವ ರೀತಿಯಲ್ಲಿ ಯಾವುದೇ ಬೆಳವಣಿಗೆಗಳು ಆಗಿಲ್ಲ. ನನ್ನನ್ನು ಕಾಂಗ್ರೆಸ್‌ನ ಯಾವ ನಾಯಕರೂ ಸಂಪರ್ಕಿಸಿಲ್ಲ. ನಾನೂ ಆ ಪಕ್ಷದ ಯಾರ ಬಳಿಯೂ ಮಾತನಾಡಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.