ADVERTISEMENT

Karnataka Politics: ರಾಜಕೀಯ ಬೆಳವಣಿಗೆ ಕುರಿತು ಖರ್ಗೆ–ಡಿಕೆಶಿ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 23:30 IST
Last Updated 6 ಅಕ್ಟೋಬರ್ 2024, 23:30 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್</p></div>

ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್

   

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಭಾನುವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ತೆರಳಿದ ಶಿವಕುಮಾರ್‌, ರಾಜ್ಯ ರಾಜಕೀಯದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. 

ADVERTISEMENT

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡ ಬಳಿಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಬ್ಬರು ನಾಯಕರೂ ಚರ್ಚೆ ನಡೆಸಿದರು. ರಾಜ್ಯದಲ್ಲಿ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಜನಗಣತಿ) ವರದಿ ಕುರಿತು ಕೂಡಾ ವಿಚಾರ ವಿನಿಮಯ ನಡೆಸಿದರು ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.