ಬೆಂಗಳೂರು: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದ ಕೆಲವು ಶಾಸಕರು ಮತ್ತೆ ಮಾತೃಪಕ್ಷ ಸೇರಲು ಮುಂದಾಗಿರುವ ಬೆನ್ನಲ್ಲೆ, ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಆರಂಭಿಸಿರುವ ‘ಆಪರೇಷನ್ ಹಸ್ತ’ದ ಮಧ್ಯೆಯೇ ಕಟ್ಟಾ ಅವರು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಬಿಜೆಪಿಗೆ ಅಖಂಡ?: ಮತ್ತೊಂದೆಡೆ, ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಮತ್ತೆ ಟಿಕೆಟ್ ಸಿಗದ ಕಾರಣಕ್ಕೆ ಬಿಎಸ್‌ಪಿ ಸೇರಿ ಕಣಕ್ಕಿಳಿದಿದ್ದ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿಗೆ ಅವರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗುತ್ತಿದ್ದು, ಆ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿಯುಲು ಅಖಂಡ ಕಸರತ್ತು ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.