ADVERTISEMENT

ರಾಜ್ಯಸಭೆ ಚುನಾವಣೆ ಸೋಲಿನ ಬಳಿಕ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಹೇಳಿದ್ದೇನು?

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 4:43 IST
Last Updated 11 ಜೂನ್ 2022, 4:43 IST
ಕುಪೇಂದ್ರ ರೆಡ್ಡಿ
ಕುಪೇಂದ್ರ ರೆಡ್ಡಿ   

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಧನ್ಯವಾದ ಹೇಳಿದ್ದಾರೆ.

ಫಲಿತಾಂಶದ ಬಳಿಕ ಟ್ವೀಟ್ ಮಾಡಿದ ಅವರು, ‘ನಿಮ್ಮ ಬೆಂಬಲ ಮತ್ತು ಮತಗಳಿಗಾಗಿ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾವು ಬಯಸಿದ ಫಲಿತಾಂಶ ಪಡೆಯುವುದು ಸಾಧ್ಯವಾಗದಿದ್ದರೂ ಒಂದು ಪಕ್ಷವಾಗಿ ಒಗ್ಗಟ್ಟಿನಿಂದ ಹಾಗೂ ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಿರುವುದು ಸಂತಸ ನೀಡಿದೆ’ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಜೈರಾಂ ರಮೇಶ್, ಜಗ್ಗೇಶ್ ಹಾಗೂ ಲಹರ್‌ ಸಿಂಗ್‌ ಅವರಿಗೆ ಅಭಿನಂದನೆಗಳು ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದ್ದವು.

ಬಿಜೆಪಿಯ ನಿರ್ಮಲಾ ಸೀತಾರಾಮನ್‌ 46, ಜಗ್ಗೇಶ್‌ 44, ಲಹರ್ ಸಿಂಗ್‌ 33 ಮತ್ತು ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರು 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕುಪೇಂದ್ರ ರೆಡ್ಡಿ 30 ಮತ್ತು ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.